• A
  • A
  • A
ಮದ್ದೂರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಮೇಲೆ ದಾಳಿ: ಮೂವರು ಬಾಂಗ್ಲಾ ಯುವತಿಯರ ರಕ್ಷಣೆ

ಮಂಡ್ಯ: ಹೈಟೆಕ್ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರು ಬಾಂಗ್ಲಾ ಯುವತಿಯರನ್ನು ರಕ್ಷಿಸಿದ್ದಾರೆ.


ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿ ಬದಿ ಇರುವ ಪ್ರಕೃತಿ ಲಾಡ್ಜ್‌ನಲ್ಲಿ ಘಟನೆ ನಡೆದಿದೆ. ಲಾಡ್ಜ್‌ನಲ್ಲಿ ಗುಹೆ ರೀತಿ ಕೊಠಡಿ ನಿರ್ಮಿಸಿ ಹುಡುಗಿಯರನ್ನು ಅಡಗಿಸಿಟ್ಟಿದ್ದರು. ಮೈಸೂರಿನ ಒಡನಾಡಿ ಸೇವಾ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.

ದಾಳಿಯಲ್ಲಿ ಸತತ 5ಗಂಟೆಗಳ ಪರಿಶೀಲನೆ ನಂತರ ಗುಹೆ ರೀತಿ ಇದ್ದ ಕೊಠಡಿ ಪತ್ತೆಯಾಗಿದೆ. ಪೊಲೀಸ್ ದಾಳಿ ನಡೆಯುತ್ತಿದ್ದಂತೆ ವಸತಿ ಗೃಹದ ಮಾಲೀಕ‌ ನಾಪತ್ತೆಯಾಗಿದ್ದಾನೆ. ಬಳಿಕ ಪೊಲೀಸರು ವಸತಿ ಗೃಹದ ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಬಗ್ಗೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು