• A
  • A
  • A
ಅಪಘಾತವಾಗಿ ರಸ್ತೆಯಲ್ಲೇ ನರಳುತ್ತಿದ್ದ ವ್ಯಕ್ತಿ: ಆಸ್ಪತ್ರೆಗೆ ಸೇರಿಸದೆ ಮಾನವೀಯತೆ ಮರೆತ ಜನ!

ದಾವಣಗೆರೆ: ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಸುಮಾರು ಒಂದು ಗಂಟೆ ಕಾಲ ರಸ್ತೆಯಲ್ಲಿಯೇ ಬಿದ್ದು ನರಳುತ್ತಿದ್ದರೂ ಅಲ್ಲಿದ್ದ ಜನ ಆಸ್ಪತ್ರೆಗೆ ಕರೆದೊಯ್ಯದೆ ಅಮಾನವೀಯತೆ ತೋರಿರುವ ಮತ್ತೊಂದು ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಜಿಲ್ಲೆಯ ಹರಪನಳ್ಳಿ ತಾಲೂಕಿನ ಕಂಚಿಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೈಕ್ ಮತ್ತು ಕಾರು ಪರಸ್ಪರ ಡಿಕ್ಕಿಯಾದ ಪರಿಣಾಮ ತೀವ್ರವಾಗಿ ಗಾಯಗೊಂಡು ವ್ಯಕ್ತಿವೋರ್ವ ರಸ್ತೆಯಲ್ಲಿ ನರಳಾಡಿದ್ದಾನೆ. ಆದರೆ ಅಲ್ಲಿದ್ದ ಜನ ಆಸ್ಪತ್ರೆಗೆ ಕರೆದೊಯ್ಯದೆ ಅಮಾನವೀಯತೆ ತೋರಿದ್ದಾರೆ ಎನ್ನಲಾಗ್ತಿದೆ.


ಹರಿಹರ ತಾಲೂಕಿನ ಭಾನುವಳ್ಳಿ ಗ್ರಾಮದ ನಿವಾಸಿ ಸಿದ್ದೇಶ್ (26) ತನ್ನ ಪತ್ನಿಯ ಮನೆಗೆ ಬೈಕ್​ನಲ್ಲಿ ಹೋಗುತ್ತಿದ್ದಾಗ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಿದ್ದೇಶ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಒಂದು ಗಂಟೆಯವರೆಗೆ ರಸ್ತೆಯಲ್ಲಿ ನರಳಾಟ ಅನುಭವಿಸಿದ್ದರೂ ಸಹ ಜನ ಆತನ ನೆರವಿಗೆ ಬಂದಿರಲಿಲ್ಲ. ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯುವ ಬದಲು ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿಯುವುದರಲ್ಲಿ ಯುವಕರು ಬ್ಯುಸಿ ಆಗಿದ್ದರು.

ಸದ್ಯ ಗಾಯಾಳು ಸಿದ್ದೇಶ್​ನನ್ನು ಹೆಚ್ಚಿನ ಚಿಕಿತ್ಸೆಗೆ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಕರುನಾಡ ಕುರುಕ್ಷೇತ್ರ

  ಪ್ರಮುಖ ನಗರಗಳು