• A
  • A
  • A
ಕಂದಕಕ್ಕೆ ಉರುಳಿದ ಇಟ್ಟಿಗೆ ಸಾಗಿಸುತ್ತಿದ್ದ ಟ್ರಕ್‌‌... 9 ಮಂದಿ ದಾರುಣ ಸಾವು

ಗಜಪತಿ: ಒಡಿಶಾದ ಗಜಪತಿ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್‌ವೊಂದು 50 ಅಡಿ ಕಂದಕಕ್ಕೆ ಉರುಳಿ ಬಿದ್ದು, ನಾಲ್ವರು ಮಹಿಳೆಯರು ಸೇರಿ 9 ಮಂದಿ ಸಾವನ್ನಪ್ಪಿದ್ದಾರೆ.


ಇಲ್ಲಿನ ಲುಹಝಾರ್‌ ಘಾಟ್‌‌ ಪ್ರದೇಶದಲ್ಲಿ ಮಂಗಳವಾರ ಈ ದುರ್ಘಟನೆ ನಡೆದಿದೆ. ಅಪಘಾತಕ್ಕೀಡಾದ ಟ್ರಕ್‌ ಇಟ್ಟಿಗೆಗಳನ್ನು ಸಾಗಿಸುತ್ತಿತ್ತು, ಇದರಲ್ಲಿ ಚಾಲಕ ಸೇರಿ 15 ಮಂದಿ ಇದ್ದರು. ಚಾಲಕನ ನಿಯಂತ್ರಣ ತಪ್ಪಿ ಟ್ರಕ್‌ ಕಂದಕಕ್ಕೆ ಉರುಳಿ ಬಿದ್ದಿದೆ.


ಪರಿಣಾಮ ಟ್ರಕ್‌ನಲ್ಲಿದ್ದ ಐವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಉಳಿದ ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇತರ ಆರು ಜನ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಗೊತ್ತಾಗಿದೆ.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ನಾಡಹಬ್ಬ

  ಪ್ರಮುಖ ನಗರಗಳು