• A
  • A
  • A
ರಾಜ್ಯ ರಾಜಕೀಯ ಹೈಡ್ರಾಮಾ... ಬೇಸರ ವ್ಯಕ್ತಪಡಿಸಿದ ಪ್ರಕಾಶ್‌ ರೈ

ಬೆಂಗಳೂರು: ನಟ ಪ್ರಕಾಶ್‌ ರೈ ಕೆಲ ದಿನಗಳ ಹಿಂದೆಯಷ್ಟೇ ಪ್ರಧಾನಿ ಮೋದಿ ಹಾಗೂ ಬಿಜೆಪಿ ವಿರುದ್ಧ ಜಸ್ಟ್‌ ಆಸ್ಕಿಂಗ್‌ ಅಭಿಯಾನ ಪ್ರಾರಂಭಿಸಿದ್ರು.

pic: Twitter


ರಾಜ್ಯ ವಿಧಾನಸಭೆಯ ಚುನಾವಣೆಯ ಮುನ್ನ ಮೋದಿ ವಿರುದ್ಧ ವಾಗ್ಯುದ್ಧ ಪ್ರಾರಂಭಿಸಿದ್ದ ರೈ, ಮತದಾನ ದಿನದಂದು ಹಾಗೂ ಫಲಿತಾಂಶದ ಬಳಿಕ ಎಲ್ಲಿಯೂ ಕಾಣಿಸಿಕೊಳ್ಳದೆ ಸೈಲೆಂಟ್‌ ಆಗಿದ್ದರು. ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದಾರೆ.

ಸದ್ಯ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಹೈಡ್ರಾಮಾ ವಿರುದ್ಧ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ, ಕಾಂಗ್ರೆಸ್‌ ಹಾಗೂ ಜೆಡಿಎಸ್‌ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂದು ತಮ್ಮ ಟ್ವಿಟರ್‌ನಲ್ಲಿ ಆಕ್ರೋಶ ತೋಡಿಕೊಂಡಿರುವ ಪ್ರಕಾಶ್‌ ರೈ, ''ಯಾರಿಗೂ ಬಹುಮತ ಬಾರದ ಚುನಾವಣಾ ಫಲಿತಾಂಶದ ನಂತರ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌, ಇವರೆಲ್ಲರೂ ಒಬ್ಬರನ್ನೊಬ್ಬರು ಕೊಳ್ಳುವ-ಮಾರುವ ವ್ಯಾಪಾರಕ್ಕಿಳಿದಿದ್ದಾರೆ. ನಮ್ಮ ಅನುಮತಿಯಿಲ್ಲದೆ, ತಮ್ಮ ಶಕ್ತ್ಯಾನುಸಾರ ದಕ್ಕಿದ್ದನ್ನು ಹಂಚಿಕೊಂಡು, ಭಿನ್ನಾಭಿಪ್ರಾಯಗಳನ್ನು ಮರೆತು, ವಿಧಾನಸೌಧದೊಳಗೆ ಒಂದಾಗಿ ಓಡಾಡುತ್ತ ಮುಂದಿನ ಚುನಾವಣೆವರೆಗೆ ಆರಾಮಾಗಿರುತ್ತಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಎದುರು ಕೊನೆಗೂ ಸೋತದ್ದು ನಾವು' ಎಂದು ರೈ ಬೇಸರ ವ್ಯಕ್ತಪಡಿಸಿದ್ದಾರೆ.ನಮ್ಮ ಕ್ಷೇತ್ರದ ಪ್ರತಿನಿಧಿಗಳ ಮೇಲೆ ನಾವಿಟ್ಟ ನಂಬಿಕೆಯನ್ನು ಇವರು ಇನ್ಯಾರಿಗೋ ಮಾರಿಕೊಳ್ಳುವುದನ್ನು, ಬೇರೆ ದಾರಿಯಿಲ್ಲದೆ ಈ ರಾಜಕಾರಣಿಗಳ ದೊಂಬರಾಟವನ್ನು ನಾವು ಒಪ್ಪಿಕೊಳ್ಳುವಂತೆ ನಮ್ಮ ಮೇಲೆ ಅಭಿಪ್ರಾಯ ಹೇರುವುದನ್ನು ನಾವು ಪ್ರಶ್ನಿಸಬೇಕು. ಇಲ್ಲದಿದ್ದರೆ ನಮ್ಮ ಈ ಅಸಹಾಯಕತೆಗೆ, ನಮ್ಮ ಅಮಾಯಕತೆ ದುರುಪಯೋಗಕ್ಕೆ, ಯಾರು ಕಾರಣವೆಂದು ನಾವು ಬೇಗ ಗೊತ್ತು ಮಾಡಿಕೊಳ್ಳದಿದ್ದರೆ, ಮತ್ತೊಮ್ಮೆ ಸೋಲುವುದು ನಾವೇ' ಎಂದು ರೈ ಹೇಳಿದ್ದಾರೆ.
CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು