• A
  • A
  • A
ಸಿಎಂ ಆದ ಬಳಿಕ ಮೊದಲ ಸುದ್ದಿಗೋಷ್ಠಿಯಲ್ಲಿ ಬಿಎಸ್‌ವೈ ಹೇಳಿದ್ದೇನು?

ಬೆಂಗಳೂರು: ವಿಶ್ವಾಸಮತ ಸಾಬೀತುಪಡಿಸಲು 15 ದಿನ ಕಾಯುವ ಅವಶ್ಯಕತೆಯಿಲ್ಲ. ಆದಷ್ಟು ಬೇಗನೆ ಬಹುಮತ ಸಾಬೀತುಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.


ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಎಸ್‌ವೈ, ಆದಷ್ಟು ಬೇಗ ವಿಶ್ವಾಸ ಮತ ಸಾಬೀತುಪಡಿಸಿ, ಲಕ್ಷಾಂತರ ಜನ ಸೇರಿಸಿ ಪ್ರಧಾನಿ, ಅಮಿತ್ ಶಾ ಸಮ್ಮುಖದಲ್ಲಿ ಸಚಿವ ಸಂಪುಟ ವಿಸ್ತರಣೆಗೆ ನಿರ್ಧಾರ ಮಾಡುತ್ತೇನೆ ಎಂದರು.


ಜನ ಬೆಂಬಲ ಬಿಜೆಪಿ ಪರ ಇದ್ದರೂ ಕಾಂಗ್ರೆಸ್ ಜೆಡಿಎಸ್ ಅನೈತಿಕ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಲು ಮುಂದಾಗಿದ್ದಾರೆ. ಕಾಂಗ್ರೆಸ್ ಜೆಡಿಎಸ್ ಶಾಸಕರು ಬಿಜೆಪಿ ಸರ್ಕಾರಕ್ಕೆ ಆತ್ಮಸಾಕ್ಷಿಯಾಗಿ ಮತ ನೀಡಬೇಕೆಂದು ಮನವಿ ಮಾಡುತ್ತೇನೆ.

ಎಲ್ಲ ಶಾಸಕರೂ ಆತ್ಮಸಾಕ್ಷಿಗೆ ಹಾಗೂ ಜನತೆ ತೀರ್ಪಿಗೆ ಅನುಗುಣವಾಗಿ ಮತ ಚಲಾಯಿಸುವ ವಿಶ್ವಾಸ ನನಗಿದೆ. 60ರ ದಶಕದಲ್ಲಿ ಇಂದಿರಾ ಗಾಂಧಿ ರಾಷ್ಟ್ರಪತಿ ಚುನಾವಣೆಯಲ್ಲಿ ಬಹುಮತವಿಲ್ಲದಿರುವಾಗ ಆತ್ಮಸಾಕ್ಷಿಗೆ ಮತ ಚಲಾಯಿಸಿ ಎಂದು‌ ಕರೆ ನೀಡಿ‌ ಗೆದ್ದಿದ್ದು ದೇಶದ ಇತಿಹಾಸದ ಮುಂದಿದೆ. ಈಗಲೂ ನನಗೆ ಅದೇ ವಿಶ್ವಾಸವಿದೆ ಎಂದು ತಿಳಿಸಿದರು.

ನಮ್ಮದು ರಾಷ್ಟ್ರೀಯ ಪಕ್ಷ. ಆದಷ್ಟು ಬೇಗ ಬಹುಮತ ಸಾಬೀತುಪಡಿಸಿ ನಂತರ ಮೂರು ನಾಲ್ಕು ಲಕ್ಷ ಜನರ ಸೇರಿಸಿ ಸಂಪುಟ ರಚಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಇತರ ರಾಜ್ಯಗಳ ಬಿಜೆಪಿ ಸಿಎಂ ಕರೆಯಲು ತೀರ್ಮಾನ ಮಾಡಿದ್ದು, ಬಹುಮತದ ನಂತರ ದೊಡ್ಡ ಸಮಾರಂಭಕ್ಕೆ ದಿನಾಂಕ ನಿಗದಿಪಡಿಸಲಾಗುತ್ತದೆ ಎಂದರು.

ಬಿಜೆಪಿ ಸರ್ಕಾರವನ್ನು ಒಪ್ಪುವ ಕಾಂಗ್ರೆಸ್‌ ಹಾಗೂ ಜೆಡಿಎಸ್ ಶಾಸಕರಿದ್ದಾರೆ ಎಂದು ಹೇಳುವ ಮೂಲಕ ಸಿಎಂ ಯಡಿಯೂರಪ್ಪ ಅಪರೇಷನ್ ಕಮಲದ ಮುನ್ಸೂಚನೆ ನೀಡಿದರು.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಕರುನಾಡ ಕುರುಕ್ಷೇತ್ರ

  ಪ್ರಮುಖ ನಗರಗಳು