• A
  • A
  • A
ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿದ ಜೇಠ್ಮಲಾನಿ: ಖಾಸಗಿಯಾಗಿ ಸುಪ್ರೀಂಗೆ ಅರ್ಜಿ

ನವದೆಹಲಿ: ಕರ್ನಾಟಕ ಮುಖ್ಯಮಂತ್ರಿಯಾಗಿ ಬಿಜೆಪಿಯ ಬಿ.ಎಸ್‌.ಯಡಿಯೂರಪ್ಪ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇತ್ತ, ಸರ್ಕಾರ ರಚಿಸಲು ಬಿಜೆಪಿಗೆ ಆಹ್ವಾನ ನೀಡಿರುವ ರಾಜ್ಯಪಾಲರ ನಿರ್ಧಾರದ ವಿರುದ್ಧ ಹಿರಿಯ ವಕೀಲ ರಾಮ್‌ ಜೇಠ್ಮಲಾನಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ.


ಸುಪ್ರೀಂಕೋರ್ಟ್‌ನ ಮುಖ್ಯನಾಯಮೂರ್ತಿ ದೀಪಕ್‌ ಮಿಶ್ರಾ, ನ್ಯಾ.ಎ.ಎಂ ಖಾನ್ವಿಲ್ಕರ್‌ ಹಾಗೂ ಡಿ.ವೈ. ಚಂದ್ರಚೂಡ್‌ ಪೀಠದ ಮುಂದೆ ರಾಮ್‌ ಜೇಠ್ಮಲಾನಿ ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿಗೆ ಆಹ್ವಾನ ನೀಡಿರುವ ರಾಜ್ಯಪಾಲರ ನಿರ್ಧಾರದ ವಿರುದ್ಧ ಅರ್ಜಿ ಸಲ್ಲಿಸಿರುವ ರಾಮ್‌ ಜೇಠ್ಮಲಾನಿ, ತಾವು ಯಾವುದೇ ಪಕ್ಷದ ಪರವಾಗಿ ಅರ್ಜಿ ಸಲ್ಲಿಸಿಲ್ಲ. ಈ ಪ್ರಕರಣದಲ್ಲಿ ವೈಯಕ್ತಿಕವಾಗಿಯೇ ಅರ್ಜಿ ಸಲ್ಲಿಸಿದ್ದೇನೆ ಎಂದು ಸರ್ವೋಚ್ಛ ನ್ಯಾಯಾಲಯಕ್ಕೆ ಹೇಳಿದ್ದಾರೆ.

ಆದರೆ, ಮುಖ್ಯನಾಯಮೂರ್ತಿ ದೀಪಕ್‌ ಮಿಶ್ರಾ ಅವರು, ನಿಮ್ಮ ಅರ್ಜಿಯನ್ನು ನಾಳೆ ವಿಚಾರಣೆ ನಡೆಸಲಿರುವ ನ್ಯಾಯ ಪೀಠದ ಮುಂದೆ ಸಲ್ಲಿಸಿ ಎಂದು ರಾಮ್‌ ಜೇಠ್ಮಲಾನಿಗೆ ಸೂಚಿಸಿದ್ದಾರೆ.

ರಾಜ್ಯಪಾಲರ ನಿರ್ಧಾರದ ವಿರುದ್ಧ ಬುಧವಾರ ಕಾಂಗ್ರೆಸ್‌ ಮತ್ತು ಜೆಡಿಎಸ್‌‌ ಪಕ್ಷಗಳು ಸುಪ್ರೀಂಕೋರ್ಟ್‌ಗೆ ಬಾಗಿಲು ತಟ್ಟಿದ್ದವು. ಮಧ್ಯರಾತ್ರಿ ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂನ ತ್ರಿಸದಸ್ಯ ಪೀಠ, ಬಿ.ಎಸ್‌.ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರಕ್ಕೆ ತಡೆ ನೀಡಲು ನಿರಾಕರಿಸಿ, ವಿಚಾರಣೆಯನ್ನು ನಾಳೆ ಮುಂದೂಡಿತ್ತು.

ಮಧ್ಯರಾತ್ರಿ 2 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೂ ಅರ್ಜಿ ವಿಚಾರಣೆ ನಡೆಯಿತು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಪ್ರಮಾಣವಚನ ತಡೆಗೆ ನಿರಾಕರಿಸಿತು. ಯಡಿಯೂರಪ್ಪ ಬೆಂಬಲಿಗ ಶಾಸಕರ ಸಂಖ್ಯೆ ಮತ್ತು ಹೆಸರನ್ನು ಸಲ್ಲಿಸುವಂತೆ ಸುಪ್ರೀಂ ತಿಳಿಸಿತ್ತು.CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು