• A
  • A
  • A
ಸಿಬಿಐ ಆಂತರಿಕ ಸಂಘರ್ಷ ತಿಳಿಗೊಳಿಸಲು ರವಿಶಂಕರ್​ ಗುರೂಜಿ ಪ್ರವಚನ

ನವದೆಹಲಿ: ಭ್ರಷ್ಟಾಚಾರ ವಿಷಯಕ್ಕೆ ಸಂಬಂಧಿಸಿದಂತೆ ಉನ್ನತಾಧಿಕಾರಿಗಳ ಕಿತ್ತಾಟದಿಂದ ಕೇಂದ್ರೀಯ ತನಿಖಾ ಸಂಸ್ಥೆಯಲ್ಲಿ (ಸಿಬಿಐ) ಉದ್ಬವಿಸಿರುವ ಬಿಕ್ಕಟ್ಟಿನ ನಿವಾರಣೆಗಾಗಿ ಆರ್ಟ್ ಆಫ್​ ಲಿವಿಂಗ್​ ಸಂಸ್ಥಾಪಕ ಶ್ರೀ ರವಿಶಂಕರ್​ ಗುರೂಜಿ ಅವರ ಪ್ರವಚನ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಸಂಸ್ಥೆಯ 150 ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಗುರೂಜಿ ಅವರ ಪ್ರವಚನವು ಸಿಬ್ಬಂದಿಯ ಮೇಲೆ ಧನಾತ್ಮಕ ಪರಿಣಾಮ ಬೀರಿ ಪರಿಸ್ಥಿತಿ ತಿಳಿಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಮೂರು ದಿನಗಳ ಈ ಕಾರ್ಯಾಗಾರವು ಸೋಮವಾರ ಮುಕ್ತಾಯಗೊಳ್ಳಲಿದೆ.

ಗುರೂಜಿ ಅವರು ಸಿಬಿಐ ಮುಖ್ಯ ಕಚೇರಿಯಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು 150 ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.

ಸಿಬಿಐ ನಿರ್ದೇಶಕ ಅಲೋಕ್​ ಕುಮಾರ್​ ವರ್ಮಾ ಅವರು ಭ್ರಷ್ಟಾಚಾರ ಎಸಗಿದ್ದಾರೆ ಎಂದು ವಿಶೇಷ ನಿರ್ದೇಶಕ ರಾಕೇಶ್​ ಆಸ್ತಾನ ಅವರು ಸಾರ್ವಜನಿಕವಾಗಿ ಮಾತನಾಡಿದ ಹಿನ್ನೆಲೆಯಲ್ಲಿ ಇಬ್ಬರನ್ನೂ ಸರಕಾರವು ರಜೆ ಮೇಲೆ ಕಳುಹಿಸಿದೆ. ಈ ಕಾರಣದಿಂದ ಸಿಬಿಐನಲ್ಲಿ ಮುಖ್ಯಸ್ಥರಿಲ್ಲದಂತಾಗಿದ್ದು ಆಂತರಿಕ ಸಂಘರ್ಷ ತಾರಕಕ್ಕೇರಿದೆ.

ಜಂಟಿ ನಿರ್ದೇಶಕ ಎಂ ನಾಗೇಶ್ವರ ರಾವ್​ ಅವರನ್ನು ಸುಪ್ರೀಂಕೋರ್ಟ್ ನಿರ್ದೇಶಕ ಸ್ಥಾನಕ್ಕೆ ನೇಮಿಸಿದ್ದು, ಸಿಬಿಐ ನಿಯಮಾವಳಿಯ ಸಂಬಂಧ ಯಾವುದೇ ನಿರ್ಧಾರ ಕೈಗೊಳ್ಳದಂತೆ ಹೇಳಿದೆ.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು