• A
  • A
  • A
ಗೃಹಿಣಿಯ ನಗ್ನ ವಿಡಿಯೋ ಮಾಡಿ ನಿರಂತರ ಅತ್ಯಾಚಾರ: ಕಾಮುಕ ಅರೆಸ್ಟ್‌‌‌‌‌

ಬೆಂಗಳೂರು: ಗೃಹಿಣಿಯ ನಗ್ನ ವಿಡಿಯೋ ಮಾಡಿ ಆಕೆಗೆ ಅದನ್ನು ತೋರಿಸಿ ಸಾಮಾಜಿಕ ತಾಣಗಳಲ್ಲಿ ಹಾಕುವುದಾಗಿ ಬೆದರಿಸಿ ಆಕೆಯ ಮೇಲೆ ವ್ಯಕ್ತಿಯೊಬ್ಬ ನಿರಂತರ ಅತ್ಯಾಚಾರ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ.


ಡಿ. 5ರಂದು ಈ ಬಗ್ಗೆ ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರುದಾರ ಮಹಿಳೆಯಿಂದ ದೂರು ಪಡೆದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಗ ಆರೋಪಿಯನ್ನು ಬಂಧಿಸಿದ್ದಾರೆ.


ಸುನೀಲ್ ಕುಮಾರ್ ಬಂಧಿತ ಆರೋಪಿ. ಈತ ಒಂದು ವರ್ಷದ ಹಿಂದೆ ಮಹಿಳೆಯೊಬ್ಬರ ಮನೆಗೆ ನುಗ್ಗಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಈ ದೃಶ್ಯಗಳನ್ನು ತನ್ನ ಮೊಬೈಲ್‌‌ನಲ್ಲಿ ಚಿತ್ರೀಕರಿಸಿಕೊಂಡಿದ್ದ. ಅಲ್ಲದೆ ಬಳಿಕ ಆತ ಮಹಿಳೆಗೆ ಬ್ಲಾಕ್‌ಮೇಲ್ ಮಾಡಲಾರಂಬಿಸಿದ್ದ ಎನ್ನಲಾಗಿದೆ.

ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಮಹಿಳೆಯನ್ನು ಬೆದರಿಸಿ ಆಕೆಯ ಇಚ್ಛೆಗೆ ವಿರುದ್ಧವಾಗಿ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದ. ನಾನು ಮದುವೆಯಾಗುವವರೆಗೂ ನೀನೇ ನನ್ನ ಹೆಂಡತಿ ಎಂದು ಆಕೆಯ ಬಳಿ ಆರೋಪಿ ಹೇಳಿಕೊಳ್ಳುತ್ತಿದ್ದ. ಅಲ್ಲದೆ ನೀನು ಇದನ್ನು ಒಪ್ಪಿಕೊಳ್ಳದಿದ್ದರೆ ನಿನ್ನ ಗಂಡನಿಗೆ ಅತ್ಯಾಚಾರದ ವಿಡಿಯೋ ಕಳಿಸುವುದಾಗಿ ಬೆದರಿಸುತ್ತಿದ್ದನಂತೆ.

ಈತನ ವರ್ತನೆಯಿಂದ ಬೇಸತ್ತ ಮಹಿಳೆ ಕಳೆದ ತಿಂಗಳು ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿರುವ ಪೊಲೀಸರು ಈಗ ಆರೋಪಿ ಸುನೀಲ್ ಕುಮಾರ್‌‌ನನ್ನು ಬಂಧಿಸಿದ್ದಾರೆ. ತನಿಖೆ ಮುಂದುವರಿಸಿರುವ ಪೊಲೀಸರು, ಆರೋಪಿ ಸುನೀಲ್ ಕುಮಾರ್ ಇದೇ ರೀತಿ ಹಲವು ಮಹಿಳೆಯರನ್ನು ದುರುಪಯೋಗ ಮಾಡಿಕೊಂಡಿದ್ದಾನೆ ಅನ್ನೋದು ಗೊತ್ತಾಗಿದೆ ಎಂದಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿಸಿ ಆರೋಪಿಯನ್ನು ಪರಪ್ಪನ ಅಗ್ರಹಾರಕ್ಕೆ ಕಳಿಸಿದ್ದಾರೆ.


CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಕರುನಾಡ ಕುರುಕ್ಷೇತ್ರ

  ಪ್ರಮುಖ ನಗರಗಳು