• A
  • A
  • A
ಪ್ರಧಾನಿ ಮೋದಿಗೆ ಸವಾಲು ಹಾಕಿದ ಪ್ರಿಯಾಂಕ್ ಖರ್ಗೆ

ಕಲಬುರಗಿ: ಪ್ರಧಾನಿ ಮೋದಿಯದ್ದು ಏನಿದ್ದರೂ ಓನ್ ವೇ. ಅವರು ಹೇಳಿದಂತೆ ದೇಶದ ಜನರು ಕೇಳ್ಬೇಕು ಎನ್ನುವ ಮನಸ್ಥಿತಿ ಹೊಂದಿದ್ದಾರೆ ಎಂದು ಐಟಿಬಿಟಿ ಹಾಗೂ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.


ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪ್ರಧಾನಿ ಬರೀ ಭಾಷಣಗಳನ್ನು ಮಾಡದೇ ಮಾಧ್ಯಮದವರ ಮುಂದೆಯೂ ಮಾತನಾಡಲಿ ಎಂದರು.


ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಮೌನ ಮನಮೋಹನ್‌ಸಿಂಗ್ ಅಂತಾರೆ. ಆದ್ರೆ ತಾವೆಂದು ಮಾಧ್ಯಮಗಳ ಮುಂದೆ ಬಂದು ಮಾತನಾಡಿದ್ದಾರೆ. ತಮಗಿಷ್ಟವಾದ ಪತ್ರಕರ್ತರನ್ನು ಕೂಡಿಸಿಕೊಂಡು ಸಂವಾದ ಮಾಡ್ತಾರೆ. ಧೈರ್ಯವಿದ್ರೆ ಎಲ್ಲಾ ಮಾಧ್ಯಮಗಳ ಮುಂದೆ ಬಂದು ಮಾತನಾಡಿಲಿ. ಪ್ರಧಾನಿ ಹೇಳಿದಲ್ಲಿ ನಾನೇ ಸುದ್ದಿಗೋಷ್ಠಿ ಆಯೋಜಿಸುತ್ತೇನೆ ಎಂದು ಪ್ರಿಯಾಂಕ್ ಖರ್ಗೆ ಸವಾಲು ಹಾಕಿದರು.

ಇನ್ನು ಇದೇ ವೇಳೆ ಮಾತನಾಡಿದ ವೈದ್ಯಕೀಯ ಸಚಿವ ಡಾ. ಶರಣಪ್ರಕಾಶ ಪಾಟೀಲ, ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿ ಬಂದ ಅಮಿತ್ ಶಾ ಮತ್ತು ಯಡಿಯೂರಪ್ಪನವರನ್ನು ಪಕ್ಕದಲ್ಲಿ ಕೂಡಿಸಿಕೊಂಡು ಭ್ರಷ್ಟಾಚಾರದ ಬಗ್ಗೆ ನೀತಿ ಪಾಠ ಹೇಳುವ ನೈತಿಕತೆ ಮೋದಿಗಿಲ್ಲ ಎಂದು ವಾಗ್ದಾಳಿ ನಡೆಸಿದ್ರು.

ಇನ್ನು ಸರ್ಕಾರ ಅಭಿವೃದ್ಧಿ ಕೆಲಸಗಳಲ್ಲಿ ಶೇ.10ರಷ್ಟು ಕಮಿಷನ್ ಪಡೆದಿದೆ ಎನ್ನುವ ಬಗ್ಗೆ ದಾಖಲೆಗಳಿದ್ದರೆ ಕೊಡಿ ಎಂದು ಸವಾಲು ಹಾಕಿದ್ರು.


CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು