• A
  • A
  • A
ನನಗೆ ಸಿಎಂ ಸ್ಥಾನ ಕೊಡುವುದಾದರೆ ಹೀಗೆ ಕೊಡಲಿ ಎಂದ ಖರ್ಗೆ

ಕಲಬುರಗಿ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಅಥವಾ ಕಾರ್ಯಕರ್ತ ಎಂದು ನನಗೆ ಸಿಎಂ ಸ್ಥಾನ ಕೊಡಲಿ. ಆದರೆ ದಲಿತ ಎಂಬ ಕಾರಣಕ್ಕೆ ಸಿಎಂ ಪದವಿ ಕೊಡುವುದು ಬೇಕಾಗಿಲ್ಲ ಎಂದು ಕಾಂಗ್ರೆಸ್ ಪಕ್ಷದ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.


ಹೈಕಮಾಂಡ್ ಹೇಳಿದ್ರೆ ದಲಿತ ಸಿಎಂಗೆ ಅವಕಾಶ ನೀಡಲಾಗುವುದು ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕಲಬುರರಗಿಯಲ್ಲಿ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ಪಕ್ಷದಲ್ಲಿ ನಿಷ್ಟಾವಂತ ಕಾರ್ಯಕರ್ತನಾಗಿ ದುಡಿದಿದ್ದೇನೆ. ಹೀಗಾಗಿ ಹಿರಿಯ ನಾಯಕ ಅಂತಾನೋ ಅಥವಾ ಕಾಂಗ್ರೆಸ್ ಪಕ್ಷದ ನಿಷ್ಟಾವಂತ ಕಾರ್ಯಕರ್ತ ಅಂತಾನೋ ಸಿಎಂ ಪದವಿ ಕೊಡಲಿ. ಅದೆಲ್ಲವನ್ನೂ ಬಿಟ್ಟು ದಲಿತ ಸಿಎಂ ಚರ್ಚೆ ಅಪ್ರಸ್ತುತ ಎಂದರು.

ನಾನು ಯಾವತ್ತೂ ದಲಿತ ಸಿಎಂ ಅಂತಾ ಅರ್ಜಿ ಹಾಕಿಲ್ಲ. ಹಾಕೋದೂ ಇಲ್ಲವೆಂದು ಖರ್ಗೆ ಸ್ಪಷ್ಟಪಡಿಸಿದರು. ಒಟ್ಟಾರೆ ಮತದಾನ ಮುಗಿದ ಒಂದೇ ದಿನದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಮತ್ತೆ ದಲಿತ ಸಿಎಂ ಕೂಗು ಕೇಳಿ ಬಂದಿದೆ. ಇದಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಧ್ವನಿಗೂಡಿಸಿದ್ದಾರೆ. ಮೇ 15 ರ ರಿಜಲ್ಟ್ ನಂತರ ಕಾಂಗ್ರೆಸ್ ಪಕ್ಷದಲ್ಲಿ ಯಾವೆಲ್ಲಾ ಬದಲಾವಣೆಗಳು ಆಗುತ್ತವೆ ಅನ್ನೋದು ಕುತೂಹಲ ಮೂಡಿಸಿದೆ.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು