• A
  • A
  • A
ಆಪರೇಷನ್‌‌‌ ಆಟ ನಡೆಯಲ್ಲ, ನಮ್ಮದೇ ಸರ್ಕಾರ... ಬಿಜೆಪಿಗೆ ಸಿದ್ದರಾಮಯ್ಯ-ಎಚ್‌ಡಿಕೆ ಟಾಂಗ್‌

ಬೆಂಗಳೂರು : ವಿಧಾನಸಭೆ ಚುನಾವಣೆ ಫಲಿತಾಂಶ ಅತಂತ್ರವಾದ ಹಿನ್ನೆಲೆಯಲ್ಲಿ ಸರ್ಕಾರ ರಚನೆ ಕಸರತ್ತು ತೀವ್ರಗೊಂಡಿದೆ. ಸರ್ಕಾರ ರಚನೆಗೆ ಅವಕಾಶ ಕೋರಿ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌.ಡಿ.ಕುಮಾರಸ್ವಾಮಿ ಹಾಗೂ ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿತು.


ಬಳಿಕ ಜಂಟಿ ಸುದ್ದಿಗೋಷ್ಠಿ ನಡೆಸಿದ ಉಭಯ ನಾಯಕರು ಸರ್ಕಾರ ರಚನೆಯ ವಿಶ್ವಾಸ ವ್ಯಕ್ತಪಡಿಸಿದರು. ಸಿದ್ದರಾಮಯ್ಯ ಮಾತನಾಡಿ, ಜೆಡಿಎಸ್‌ ನೇತೃತ್ವದ ಸರ್ಕಾರ ರಚನೆಗೆ ಕಾಂಗ್ರೆಸ್‌ ಸಂಪೂರ್ಣ ಬೆಂಬಲ ನೀಡಿರುವುದಾಗಿ ಘೋಷಿಸಿದರು. ಕಾನೂನಾತ್ಮಕವಾಗಿ ಸಂಖ್ಯಾಬಲದ ಮೇಲೆ ಸರ್ಕಾರ ರಚನೆಯಾಗಬೇಕು. ಈ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಚುನಾವಣಾ ಆಯೋಗದಿಂದ ಪಕ್ಷಗಳ ಬಲಾಬಲದ ವರದಿ ಸಲ್ಲಿಕೆಯಾದ ಬಳಿಕ ರಾಜ್ಯಪಾಲರು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕಾಂಗ್ರೆಸ್‌ 78 ಸ್ಥಾನ ಪಡೆದರೆ, ಜೆಡಿಎಸ್‌ 38 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ನಡುವೆ ಇಬ್ಬರು ಪಕ್ಷೇತರರ ಬೆಂಬಲವೂ ತಮಗಿದೆ ಎಂದು ಸಿದ್ದರಾಮಯ್ಯ ಘೋಷಿಸಿದರು. ಇದು ಕಾಂಗ್ರೆಸ್‌ ಸರ್ಕಾರ ಅಲ್ಲ, ಜೆಡಿಎಸ್‌ ನೇತೃತ್ವದ ಕಾಂಗ್ರೆಸ್‌ ಮೈತ್ರಿಯುಳ್ಳ ಸರ್ಕಾರ ಎಂದು ಸ್ಪಷ್ಟಪಡಿಸಿದರು.


ಇದೇ ವೇಳೆ ಮಾತನಾಡಿದ ಕುಮಾರಸ್ವಾಮಿ , ಕಾಂಗ್ರೆಸ್‌ ಬೆಂಬಲವಿರುವ ಬಗ್ಗೆ ರಾಜ್ಯಪಾಲರಿಗೆ ಮನವಿ ನೀಡಿರುವುದಾಗಿ ತಿಳಿಸಿದರು. ಮೈತ್ರಿ ಯಾವ ರೀತಿಯಲ್ಲಿ ಇರಲಿದೆ ಎಂಬುದನ್ನು ಎರಡೂ ಪಕ್ಷಗಳು ಕುಳಿತು ತೀರ್ಮಾನಿಸಲಿವೆ ಎಂದರು. ಆಪರೇಷನ್‌ ಕಮಲದಲ್ಲಿ ಬಿಜೆಪಿಗರು ಸಿದ್ಧಹಸ್ತರು, ಆ ಬಗ್ಗೆ ನಮಗೇನು ತಿಳಿದಿಲ್ಲ ಎಂದರು. ಇದಕ್ಕೆ ದನಿಗೂಡಿಸಿ ಸಿದ್ದರಾಮಯ್ಯ, ಅವರು ಆಪರೇಷನ್‌‌ ಕಮಲದಲ್ಲಿ ಈ ಹಿಂದೆ ಯಶಸ್ವಿಯಾಗಿದ್ದರು, ಆದರೆ ಈ ಬಾರಿ ಅದು ಫಲಿಸಲ್ಲ ಎಂದು ಟಾಂಗ್‌ ಕೊಟ್ಟರು.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಕರುನಾಡ ಕುರುಕ್ಷೇತ್ರ

  ಪ್ರಮುಖ ನಗರಗಳು