• A
  • A
  • A
ಪ್ರದಕ್ಷಿಣೆ ಹಾಕುತ್ತಿದ್ದಾಗ ಎದುರು ಬಂದ ಯುವತಿ ಮೇಲೆ ಮಾಜಿ ಸಿಎಂ ಮಗಳಿಂದ ಹಲ್ಲೆ!?

ರಾಮನಗರ : ರಾಜ್ಯದ ಆದರ್ಶ ರಾಜಕಾರಣಿ ಎಂದು ಖ್ಯಾತಿ ಪಡೆದ ಮಾಜಿ ಸಿಎಂ ಕೆಂಗಲ್ ಹನುಮಂತಯ್ಯನವರ ಮಗಳು ಯುವತಿಯೋರ್ವಳ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕೆಂಗಲ್ ಬಳಿಯ ಆಂಜನೇಯ ದೇವಸ್ಥಾನದ ಆವರಣದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.


ಮಾಜಿ ಸಿಎಂ ಕೆಂಗಲ್ ಹನುಮಂತಯ್ಯನವರ ಮಗಳು ವಿಜಯಲಕ್ಷ್ಮಿ ಎಂಬುವರು ಹಲ್ಲೆ ನಡೆಸಿದ ಆರೋಪಕ್ಕೆ ಗುರಿಯಾದವರು. ಇಲ್ಲಿನ ವಂದಾರಗುಪ್ಪೆ ನಿವಾಸಿ ವರ್ಷಾ ಥಳಿತಕ್ಕೊಳಗಾದ ಯುವತಿಯಾಗಿದ್ದಾಳೆ. ದೇವಾಲಯದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ವೇಳೆ ಎದುರಿಗೆ ಬಂದಳು ಎಂಬ ಕಾರಣಕ್ಕೆ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಯುವತಿ ಆರೋಪಿಸಿದ್ದಾಳೆ.
ವಂದಾರಗುಪ್ಪೆ ನಿವಾಸಿ ವರ್ಷಾ ಥಳಿತಕ್ಕೊಳಗಾದ ಯುವತಿಯಾಗಿದ್ದು, ಅಳುತ್ತಿದ್ದುದ್ದನ್ನು ಗಮನಿಸಿದ ದೇವಾಲಯದ ಭಕ್ತರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಯುವತಿ ಮೇಲೆ ಹಲ್ಲೆ ಮಾಡಿ ಕಾರು ಹತ್ತಿ ಹೋಗುತ್ತಿದ್ದುದ್ದನ್ನು ಗಮನಿಸಿದ ಪ್ರತ್ಯಕ್ಷದರ್ಶಿಗಳು ವಿಜಯಲಕ್ಷ್ಮಿ ಅವರ ಕಾರಿನ ಮೇಲೆ ದಾಳಿ ನಡೆಸಿದ್ದಲ್ಲದೆ ಕಾರಿನ ಗಾಜು ಪುಡಿ ಪುಡಿಗೊಳಿಸಿದ್ದಾರೆ.


ಅಲ್ಲದೆ ಗಲಾಟೆ ಹೆಚ್ಚಾಗಿದ್ದರಿಂದ ಸ್ಥಳಕ್ಕೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಮುಂದುವರೆಸಿದ್ದಾರೆ.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು