• A
  • A
  • A
ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಬರ್ಬರ ಕೊಲೆ... ಲಾಡ್ಜ್​ ಮ್ಯಾನೇಜರ್​ ಕತ್ತು ಸೀಳಿ ಹತ್ಯೆ!

ಕಲಬುರಗಿ: ವ್ಯಕ್ತಿಯ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ಕೇಂದ್ರ ಬಸ್ ನಿಲ್ದಾಣದ ಎದುರು ನಡೆದಿದೆ.


ಕೇಂದ್ರ ಬಸ್ ನಿಲ್ದಾಣದ ಹತ್ತಿರ ಇರುವ ಕಾವೇರಿ ಲಾಡ್ಜ್ ಮ್ಯಾನೇಜರ್​, ಮೇಳಕುಂದ ಗ್ರಾಮದ ನಿವಾಸಿ ಮಲ್ಲಿಕಾರ್ಜುನ್(29) ಕೊಲೆಯಾದ ವ್ಯಕ್ತಿ.ಇಂದು ಬೆಳ್ಳಂಬೆಳಗ್ಗೆ ಮೂವರು ದುಷ್ಕರ್ಮಿಗಳು ಲಾಡ್ಜ್ ಬಳಿ ಬಂದು ಮಲ್ಲಿಕಾರ್ಜುನ್ ಜತೆ ಮಾತನಾಡಿದಂತೆ ಮಾಡಿ, ಮಾರಕಾಸ್ತ್ರದಿಂದ ಆತನ ಕುತ್ತಿಗೆ ಸೀಳಿ ಬರ್ಬರವಾಗಿ ಹತ್ಯೆಗೈದಿದ್ದಾರೆ. ದುಷ್ಕರ್ಮಿಗಳ ಅಟ್ಟಹಾಸ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೊಲೆಗೈದ ದುಷ್ಕರ್ಮಿಗಳು ರಾಜಾರೋಷವಾಗಿ ಬೈಕ್ ಮೇಲೆ ಕುಳಿತು ವಾಪಸ್​ ತೆರಳಿದ್ದಾರೆ.

ಜನನಿಬಿಡ ಪ್ರದೇಶದಲ್ಲಿ ಹಾಡಹಗಲೇ ಈ ಕೊಲೆ ನಡೆದಿರುವುದು ಕಲಬುರಗಿ ಜನರನ್ನು ಬೆಚ್ಚಿ ಬೀಳಿಸಿದೆ. ಮೇಲ್ನೋಟಕ್ಕೆ ಪರಿಚಿತರೇ ಹತ್ಯೆಗೈದಂತೆ ಕಂಡುಬಂದಿದೆ. ಸ್ಥಳಕ್ಕೆ ಎಸ್ಪಿ ಎನ್​. ಶಶಿಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಸಿಸಿಟಿವಿ ದೃಶ್ಯ ಆಧಾರದ ಮೇಲೆ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು