• A
  • A
  • A
ಮಾಲೀಕಯ್ಯ ಗುತ್ತೇದಾರ್‌ಗೆ ಪ್ರಿಯಾಂಕ್ ಖರ್ಗೆ ಸವಾಲು

ಕಲಬುರಗಿ: ನಾನು ಕಲಬುರಗಿ ಗ್ರಾಮಿಣ ಮತಕ್ಷೇತ್ರದಿಂದ ಸ್ಪರ್ಧಿಸ್ತೀನಿ ಎಂಬ ಗಾಳಿ ಸುದ್ದಿಗೆ ಯಾರು ಕಿವಿ ಕೊಡಬಾರದು. ಚಿತ್ತಾಪುರ ಕ್ಷೇತ್ರ ಬಿಟ್ಟು ನಾನು ಎಲ್ಲಿಗೂ ಹೋಗುವುದಿಲ್ಲ ಎಂದು ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕಾಂಗ್ರೆಸ್ ಅಭ್ಯರ್ಥಿಗಳ ನಕಲಿ ಪಟ್ಟಿಯೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅದೊಂದು ಸುಳ್ಳು ಸುದ್ದಿ, ಗ್ರಾಮೀಣ ಕ್ಷೇತ್ರಕ್ಕೆ ಪ್ರಿಯಾಂಕ್ ಖರ್ಗೆ ಅಭ್ಯರ್ಥಿ ಎಂದು ಸುದ್ದಿ ಹರಡಿಸಲಾಗಿದೆ. ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಲು ಬಿಜೆಪಿ ಇಂತಹದೊಂದು ಗಾಳಿ ಸುದ್ದಿ ಹರಡಿಸಿದ್ದಾಗಿ ಆರೋಪಿಸಿದರು.

ಈಗಾಗಲೇ ತಾವು ಚಿತ್ತಾಪುರ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದು, ಕ್ಷೇತ್ರ ಬದಲಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟ ಪಡಿಸಿದರು. ಇದೇ ವೇಳೆ ಪ್ರಿಯಾಂಕ್ ಖರ್ಗೆ ಓರ್ವ ಬಚ್ಚಾ ಎಂದು ಮಾಲೀಕಯ್ಯ ಗುತ್ತೇದಾರ್ ಹೇಳಿಕೆ ವಿಚಾರವಾಗಿ ಮಾತನಾಡಿದ ಪ್ರಿಯಾಂಕ್, ಬಚ್ಚಾ ಯಾರು ಅನ್ನೋದು ಮತದಾರರು ನಿರ್ಧರಿಸುತ್ತಾರೆ. ಅಪ್ಪ ಮಕ್ಕಳನ್ನ ಈ ಬಾರಿ ಸೋಲಿಸ್ತೀನಿ ಅಂತಾ ಹೇಳಿರುವ ಗುತ್ತೇದಾರ್‌, ಅಫಜಲಪುರದಲ್ಲಿ ಈ ಬಾರಿ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದರು. ತಾವೇ ಸ್ವತಃ ಅಫಜಲಪುರ ಕ್ಷೇತ್ರಕ್ಕೆ ಹೋಗಿ ಪ್ರಚಾರ ಮಾಡುವುದಾಗಿಯೂ ಹೇಳಿದರು.


CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು