• A
  • A
  • A
3 ವರ್ಷವಾದ್ರೂ ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಗೆ ಗುದ್ದಲಿ ಪೂಜೆ ಆಗಿಲ್ಲ: ಈಶ್ವರಪ್ಪ ಬೇಸರ

ಶಿವಮೊಗ್ಗ: ಶಿವಮೊಗ್ಗ ಕೇಂದ್ರ ಸರ್ಕಾರದ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿ ಮೂರು ವರ್ಷಗಳೇ ಕಳೆದಿದ್ದರೂ ಇನ್ನೂ ಯೋಜನೆಗೆ ಅಧಿಕೃತವಾಗಿ ಗುದ್ದಲಿಪೂಜೆಯೇ ನಡೆದಿಲ್ಲವೆಂದು ಕೆ.ಎಸ್.ಈಶ್ವರಪ್ಪ ಅಸಮಾಧಾನ ವ್ಯಕ್ತಪಡಿಸಿದರು.


ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆಗೆ ಅಗತ್ಯ ಅನುದಾನ ಮಂಜೂರು ಮಾಡಿತ್ತು. ಆದರೆ ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನವನ್ನು ನೀಡಲಿಲ್ಲ. ಜೊತೆಗೆ ಈ ಹಿಂದಿದ್ದ ಶಾಸಕರು ಈ ಬಗ್ಗೆ ಗಮನ ಹರಿಸಲಿಲ್ಲ. ಇದರಿಂದಾಗಿ ಅನುದಾನ ಬಂದಿದ್ದರೂ ಸ್ಮಾರ್ಟ್ ಸಿಟಿ ಯೋಜನೆಯಡಿ ಕಳೆದ ಮೂರು ವರ್ಷಗಳಿಂದ ಯಾವ ಕಾರ್ಯಗಳೂ ನಡೆದಿಲ್ಲವೆಂದು ದೂರಿದರು.


ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಶಿವಮೊಗ್ಗ ನಗರಕ್ಕೆ ಅನ್ಯಾಯವಾಗಿದೆ ಎಂಬುದನ್ನು ರಾಜ್ಯದ ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಅವರ ಗಮನಕ್ಕೆ ತಂದಿದ್ದೇನೆ. ಸ್ಮಾರ್ಟ್ ಸಿಟಿ ಯೋಜನೆಯಡಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದಿಂದ ತಲಾ 100 ಕೋಟಿ ರೂಪಾಯಿ ಹಣವನ್ನು ಪ್ರತಿ ವರ್ಷ ನೀಡಬೇಕು. ಈ ಹಣ ಬಳಸಿಕೊಂಡು ಶಿವಮೊಗ್ಗವನ್ನು ಸ್ಮಾರ್ಟ್ ಸಿಟಿಯನ್ನಾಗಿಸಲು ಕ್ರಮ ಕೈಗೊಳ್ಳುತ್ತೇನೆ. ಈ ಹಿನ್ನೆಲೆಯಲ್ಲಿ ಕಾಲಕಾಲಕ್ಕೆ ಅಧಿಕಾರಿಗಳ ಸಭೆ ನಡೆಸುತ್ತೇನೆ. ಶೀಘ್ರವೇ ಕೇಂದ್ರದ ನಗರಾಭಿವೃದ್ಧಿ ಸಚಿವರು ಹಾಗೂ ರಾಜ್ಯದ ನಗರಾಭಿವೃದ್ಧಿ ಸಚಿವರನ್ನು ಶಿವಮೊಗ್ಗಕ್ಕೆ ಕರೆಯಿಸಿ ಅಧಿಕೃತವಾಗಿ ಸ್ಮಾರ್ಟ್ ಸಿಟಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವುದಾಗಿ ಅವರು ತಿಳಿಸಿದರು.

ಕಾಂಗ್ರೆಸ್‌‌ನಿಂದಲೇ ಕಾಂಗ್ರೆಸ್ ಮುಕ್ತ:

ಕಾಂಗ್ರೆಸ್ ಪಕ್ಷ ಕುತಂತ್ರ ರಾಜಕಾರಣ ಮಾಡುತ್ತಿದೆ. ಇತಿಹಾಸದಲ್ಲೇ ಕಾಂಗ್ರೆಸ್ ಪಕ್ಷ ಇತಂಹ ದುಸ್ಥಿತಿಗೆ ಬಂದಿದ್ದನ್ನು ನಾನು ನೋಡಿರಲಿಲ್ಲ. ನರೇಂದ್ರ ಮೋದಿ ಕಾಂಗ್ರೆಸ್ ಮುಕ್ತ ಕರ್ನಾಟಕಕ್ಕೆ ಕರೆ ನೀಡಿದ್ದರು. ಆದರೆ ಕರ್ನಾಟಕದಲ್ಲಿ ಕಾಂಗ್ರೆಸ್‌‌ನಿಂದಲೇ ಕಾಂಗ್ರೆಸ್ ಮುಕ್ತ ಕರ್ನಾಟಕವಾಗಲಿದೆ ಎಂದು ಈಶ್ವರಪ್ಪ ಭವಿಷ್ಯ ನುಡಿದರು.


CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು