• A
  • A
  • A
ವೈರಲ್‌ ಆದ ಸಮೀಕ್ಷಾ ವರದಿಯಿಂದ ಶಾಕ್‌... ದೂರು ನೀಡಲು ಮುಂದಾದ ಕಾಂಗ್ರೆಸ್‌!

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದು ಸಿಹೆಚ್ಎಸ್ ಎನ್ನುವ ಖಾಸಗಿ ಸಂಸ್ಥೆ ಚುನಾವಣಾ ಪೂರ್ವ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡಿದೆ.


ಕಾಂಗ್ರೆಸ್ ಪಕ್ಷದ ನಿರ್ದೇಶನದ ಮೇರೆಗೆ ಸಮೀಕ್ಷೆ ನಡೆಸಿರುವುದಾಗಿ ಹೇಳಿಕೊಂಡಿದೆ. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಸಮೀಕ್ಷಾ ವರದಿ ವಿರುದ್ಧ ಸೈಬರ್ ಕ್ರೈಂಗೆ ದೂರು ನೀಡುವುದಾಗಿ ಹೇಳಿದ್ದಾರೆ.


ಸಿಹೆಚ್ಎಸ್ ಎನ್ನುವ ಖಾಸಗಿ ಸಂಸ್ಥೆ ಚುನಾವಣಾ ಪೂರ್ವ ಸಮೀಕ್ಷೆ ಮಾಡಿ ಅದರ ವರದಿಯನ್ನು ಮಾಧ್ಯಮಗಳಿಗೆ ಹರಿಬಿಟ್ಟಿದೆ. ಹಾಗು ಕೆಪಿಸಿಸಿ ಅಧ್ಯಕ್ಷರ ನಿರ್ದೇಶನದ ಮೇರೆಗೆ ಸಮೀಕ್ಷೆ ಮಾಡಲಾಗಿದೆ ಎಂದು ಹೇಳಿಕೊಂಡಿದೆ. ಈ ವರದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಕೆಪಿಸಿಸಿ ಇದು ಸತ್ಯಕ್ಕೆ ದೂರವಾದ ವಿಷಯ. ಈ ಸಂಸ್ಥೆಗೆ ನಾವು ಯಾವುದೇ ಸಮೀಕ್ಷೆ ಮಾಡಲು ಅವಕಾಶ ಕೊಟ್ಟಿಲ್ಲವೆಂದು ಸ್ಪಷ್ಟೀಕರಣ ನೀಡಿದೆ.

ನಮ್ಮ ಪಕ್ಷಕ್ಕೂ ಈ ಸಮೀಕ್ಷೆಗೂ ಯಾವುದೇ ರೀತಿಯ ಸಂಬಂಧವಿಲ್ಲ. ಚುನಾವಣಾ ಸಂದರ್ಭದಲ್ಲಿ ಇಂತಹ ಅಪಪ್ರಚಾರ ಮತ್ತು ಗಾಳಿ ಸುದ್ದಿಯನ್ನು ಕೆಲವರು ಸ್ವಹಿತಾಸಕ್ತಿಗಾಗಿ ಹಬ್ಬಿಸುತ್ತಿದ್ದಾರೆ. ಇದಕ್ಕೆಲ್ಲ ರಾಜ್ಯದ ಜನರು ಕಿವಿಗೊಡಬಾರದು, ಈ ರೀತಿ ಮಾಡಿದವರ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ತಿಳಿಸಿದ್ದಾರೆ.

ಸಮೀಕ್ಷಾ ವರದಿಯಲ್ಲಿ ಏನಿದೆ?

ಸಿಹೆಚ್ಎಸ್ ಹೆಸರಿನ ಸಂಸ್ಥೆ ಡಿಸೆಂಬರ್ ತಿಂಗಳಿನಲ್ಲಿ ಸಮೀಕ್ಷೆ ನಡೆಸಿ ಜನವರಿ 5 ರಂದು ಕೆಪಿಸಿಸಿ ಅಧ್ಯಕ್ಷರಿಗೆ ವರದಿ ನೀಡಲಾಗಿದೆ ಎಂದು ಹೇಳಿಕೊಂಡಿದೆ. ಕಾಂಗ್ರೆಸ್ ಶೇ.36.4, ಬಿಜೆಪಿ ಶೇ.33.2, ಜೆಡಿಎಸ್ ಶೇ.24.9 ಹಾಗು ಇತರೆ ಶೇ.5.5 ಮತಗಳ ಹಂಚಿಕೆಯಾಗಲಿದೆ ಎಂದು ಸಮೀಕ್ಷಾ ವರದಿ ಹೇಳಿದೆ. ವರದಿಯಲ್ಲಿ ಆಡಳಿತಾರೂಢ ಕಾಂಗ್ರೆಸ್‌ಗೆ ಭಾರಿ ಹಿನ್ನಡೆಯಾಗುತ್ತದೆ, ನಿರೀಕ್ಷೆಗೂ ಮೀರಿ ಜೆಡಿಎಸ್ ಸ್ಥಾನ ಗಳಿಸಲಿದೆ ಎಂದಿದೆ.

ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ಯಾರಿಗೆ ಎಷ್ಟು ಸ್ಥಾನ?

ಕಾಂಗ್ರೆಸ್ 77-81
ಬಿಜೆಪಿ 73-76
ಜೆಡಿಎಸ್ 64-66
ಇತರೆ 4-5
ಯಾವ ಭಾಗದಲ್ಲಿ ಯಾವ ಪಕ್ಷ ಪ್ರಾಬಲ್ಯ:

ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಹೈದರಾಬಾದ್ ಕರ್ನಾಟಕದಲ್ಲಿ ಮಾತ್ರ ದೊಡ್ಡ ಪ್ರಮಾಣದಲ್ಲಿ ಸ್ಥಾನಗಳು ಬರಲಿದ್ದು, ಮುಂಬೈ ಕರ್ನಾಟಕ, ಮಧ್ಯ ಕರ್ನಾಟಕ, ಕರಾವಳಿ ಕರ್ನಾಟಕದಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಲಿದೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪ್ರಾಬಲ್ಯ ಮೆರೆಯಲಿದೆ ಎಂದು ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ.

ಹಳೆ ಮೈಸೂರಿನಲ್ಲಿ ಕಾಂಗ್ರೆಸ್ 29, ಬಿಜೆಪಿ 16, ಜೆಡಿಎಸ್ -42 ಹಾಗು ಇತರೆ 2 ಸ್ಥಾನ

ಹೈದರಾಬಾದ್ ಕರ್ನಾಟಕ ಭಾಗದಲ್ಲಿ, ಕಾಂಗ್ರೆಸ್ 19, ಬಿಜೆಪಿ 13, ಜೆಡಿಎಸ್ 8

ಮುಂಬೈ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ 17, ಬಿಜೆಪಿ 25, ಜೆಡಿಎಸ್ 6 ಹಾಗು ಇತರೆ 2 ಸ್ಥಾನ

ಮಧ್ಯ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ 8, ಬಿಜೆಪಿ 11, ಜೆಡಿಎಸ್ 7 ಸ್ಥಾನ

ಕರಾವಳಿ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್ 6, ಬಿಜೆಪಿ 11, ಜೆಡಿಎಸ್ 2 ಸ್ಥಾನ ಪಡೆಯಲಿದೆ ಎನ್ನುವುದು ಸಮೀಕ್ಷೆಯಲ್ಲಿ ಹೇಳಲಾಗಿದೆ.

ಫೇವರಿಟ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು?

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಶೇ.21, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪರ ಶೇ.28 ರಷ್ಟು ಜನ ಒಲವು ವ್ಯಕ್ತಪಡಿಸಿದ್ದರೆ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಪರ ಶೇ.36 ರಷ್ಟು ಜನ ಒಲವು ವ್ಯಕ್ತಪಡಿಸಿದ್ದಾರೆ ಎನ್ನಲಾಗ್ತಿದೆ. ಶೇ.2 ರಷ್ಟು ಜನ ಗೊತ್ತಿಲ್ಲ ಎಂದಿದ್ದರೆ, ಲೋಕಸಭೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಾ. ಜಿ ಪರಮೇಶ್ವರ್ ಪರ ಸಮಾನ ಒಲವು ವ್ಯಕ್ತವಾಗಿದೆ. ಅವರೂ ಸೇರಿದಂತೆ ಇತರೆ ಅಭ್ಯರ್ಥಿಗಳ ಪರ ಶೇ.14 ರಷ್ಟು ಜನರು ಒಲವು ವ್ಯಕ್ತಪಡಿಸಿದ್ದಾರೆ ಎಂದು ವರದಿ ಹೇಳಿದೆ.CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಕರುನಾಡ ಕುರುಕ್ಷೇತ್ರ

  ಪ್ರಮುಖ ನಗರಗಳು