• A
  • A
  • A
ಇಂದಿನಿಂದ ನಾಮಪತ್ರ ಸಲ್ಲಿಕೆ... ಕಡ್ಡಾಯವಾಗಿ ಪಾಲಿಸಬೇಕಾದ ಷರತ್ತುಗಳು ಏನು?

ಬೆಂಗಳೂರು: ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ ಆರಂಭಗೊಳ್ಳಲಿದೆ. ಏಪ್ರಿಲ್ 24 ರ ಮಂಗಳವಾರ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯಗೊಳ್ಳಲಿದ್ದು, ಅಷ್ಟರೊಳಗೆ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಬೇಕು.


ನಾಮಪತ್ರ ಸಲ್ಲಿಕೆಗೆ ಚುನಾವಣಾ ಆಯೋಗ ಕೆಲ ಷರತ್ತುಗಳನ್ನು ವಿಧಿಸಿದ್ದು, ಅವುಗಳನ್ನು ಅಭ್ಯರ್ಥಿಗಳು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ.

ನಾಮಪತ್ರ ಸಲ್ಲಿಕೆಗೆ ಷರತ್ತುಗಳು:



* ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶ.
* ನಾಮಪತ್ರ ಸಲ್ಲಿಸಲು ಬರುವ ಅಭ್ಯರ್ಥಿಯ ಜೊತೆಯಲ್ಲಿ ಐವರು ಬೆಂಬಲಿಗರಿಗೆ ಅವಕಾಶ.
* ನಾಮತ್ರ ಸಲ್ಲಿಸಲು ಒಬ್ಬ ಅಭ್ಯರ್ಥಿ ಕೇವಲ ಮೂರು ವಾಹನಗಳ ಜೊತೆ ಮಾತ್ರ ಬರಬೇಕು.
* ನಾಮಪತ್ರ ಸಲ್ಲಿಸುವವರು ಬೇರೆ ಕ್ಷೇತ್ರದ ಅಭ್ಯರ್ಥಿ ಆಗಿದ್ದರೆ, ಎರಡು ರೀತಿಯ ಅಫಿಡವಿಟ್ ಸಲ್ಲಿಸಬೇಕು.
* ಅರ್ಜಿಯಲ್ಲಿ ಎಲ್ಲಾ ಮಾಹಿತಿ ನೀಡೋದು ಕಡ್ಡಾಯ. ಇಲ್ಲದಿದ್ದರೆ ನಾಮಪತ್ರ ತಿರಸ್ಕೃತಗೊಳ್ಳುತ್ತದೆ.
* ನಾಮಪತ್ರ ಸಲ್ಲಿಸುವ ಎಸ್.ಸಿ, ಎಸ್.ಟಿ ಅಭ್ಯರ್ಥಿಗಳು ಐದು ಸಾವಿರ ಹಣ ಠೇವಣಿ ಇಡಬೇಕು.
* ಇತರೆ ವರ್ಗದ ಅಭ್ಯರ್ಥಿಗಳು ಕಡ್ಡಾಯವಾಗಿ ಹತ್ತು ಸಾವಿರ ಹಣ ಡೆಪಾಸಿಟ್ ಇಡಬೇಕು.
* ಅಭ್ಯರ್ಥಿಗಳು ಹೊಸ ಬ್ಯಾಂಕ್ ಅಕೌಂಟ್ ತೆರೆದು, ಚುನಾವಣಾ ಪ್ರಚಾರಕ್ಕೆ ಅಲ್ಲಿಂದಲೇ ಹಣ ಖರ್ಚು ಮಾಡಬೇಕು.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಕರುನಾಡ ಕುರುಕ್ಷೇತ್ರ

  ಪ್ರಮುಖ ನಗರಗಳು