• A
  • A
  • A
ವಿರೋಧದ ಮಧ್ಯೆಯೂ ಆಪ್ತರ ಕೈಹಿಡಿದ ಬಿಎಸ್‌‌ವೈ: ದಾವಣಗೆರೆ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಕಗ್ಗಂಟಾದ ಟಿಕೆಟ್‌‌‌‌‌‌‌‌!

ದಾವಣಗೆರೆ: ಬಿಜೆಪಿ ಬಿಡುಗಡೆ ಮಾಡಿರುವ 2ನೇ ಪಟ್ಟಿಯಲ್ಲಿ ದಾವಣಗೆರೆ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಕೇವಲ ಎರಡು ಕ್ಷೇತ್ರಗಳ ಟಿಕೆಟ್ ಫೈನಲ್ ಆಗಿದೆ.


ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪ್ತ ಹೊನ್ನಾಳಿ ಕ್ಷೇತ್ರದ ಆಕಾಂಕ್ಷಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹಾಗೂ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಾಡಳು ವಿರುಪಾಕ್ಷಪ್ಪರಿಗೆ ಟಿಕೆಟ್ ನೀಡಿದ್ದಾರೆ. ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ 2008 ರಿಂದ 2013ರವರೆಗೆ ರೆಸಾರ್ಟ್ ರಾಜಕಾರಣ ಮಾಡಿ ಬಿಜೆಪಿ ಪಕ್ಷದ ಘನತೆ ಗೌರವಕ್ಕೆ ಧಕ್ಕೆ ತಂದಿದ್ದಾರೆ ಹಾಗೂ ಕಳೆದ ಬಾರಿ ಬಿಜೆಪಿ ಬಿಟ್ಟು ಕೆಜೆಪಿಗೆ ಹೋಗಿ ಪಕ್ಷಾಂತರ ಮಾಡಿದ್ದಾರೆ. ಹೀಗಾಗಿ ಅವರಿಗೆ ಹೊನ್ನಾಳಿಯಲ್ಲಿ ಟಿಕೆಟ್ ನೀಡಬಾರದು ಎಂದು ಸಂಗೊಳ್ಳಿ ರಾಯಣ್ಣ ಬ್ರೀಗೆಡ್ ಹೆಸರಿನಲ್ಲಿ ಹಲವಾರು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದರು.


ಈ ವಿರೋಧದ ನಡುವೆಯೂ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯಗೆ ಟಿಕೆಟ್ ನೀಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಇನ್ನು ಚನ್ನಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಾಜಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಕೆಜೆಪಿಗೆ ಹೋಗಿ ಪಕ್ಷಾಂತರ ಮಾಡಿದ್ದಾರೆ. ಹೀಗಾಗಿ ಅವರಿಗೆ ಟಿಕೆಟ್ ನೀಡಬಾರದು ಎಂದು ಕಳೆದ ಬಾರಿ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಪ್ರಸ್ತುತ ತುಮ್ಕೊಸ್ ಅಧ್ಯಕ್ಷ ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದರು.
ಈ ವಿರೋಧಗಳ ನಡುವೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹಾಗೂ ಮಾಡಾಳು ವಿರೂಪಾಕ್ಷಪ್ಪಗೆ ಟಿಕೆಟ್ ನೀಡುವ ಮೂಲಕ ಬಿಎಸ್‌ವೈ ಆಪ್ತರ ಕೈ ಹಿಡಿದಿದ್ದಾರೆ. ಮೊದಲ ಬಿಜೆಪಿ ಪಟ್ಟಿಯಲ್ಲಿ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಚಿವ ಎಸ್.ಎ.ರವೀಂದ್ರನಾಥ ಹೆಸರು ಘೋಷಣೆಯಾಗಿದೆ. ಇನ್ನು ಹರಪನಹಳ್ಳಿಯಲ್ಲಿ ಮಾಜಿ ಸಚಿವ ಕರುಣಾಕರ ರೆಡ್ಡಿ ಹಾಗೂ ಕೊಟ್ರೇಶ್ ನಡುವೆ ಟಿಕೆಟ್ ಪೈಪೋಟಿ ಇದೆ. ಹರಿಹರದಲ್ಲಿ ಮಾಜಿ ಶಾಸಕ ಬಿ.ಪಿ.ಹರೀಶ್ ಹಾಗೂ ಮಾಜಿ ಪೊಲೀಸ್ ಅಧಿಕಾರಿ ಕೆ.ಎಸ್.ದೇವೇಂದ್ರಪ್ಪ ಕುಣೆಬೆಳಕೆರೆ ನಡುವೆ ಟಿಕೆಟ್ ಫೈಟ್ ಇದೆ. ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಯಶವಂತರಾವ್ ಮತ್ತು ಎಚ್ ಎಸ್ ನಾಗರಾಜ್ ನಡುವೆ ಟಿಕೆಟ್ ಫೈಟ್ ಇದೆ.

ಜಗಳೂರು ಕ್ಷೇತ್ರದಲ್ಲಿ ಮಾಜಿ ಶಾಸಕ ಎಸ್.ವಿ.ರಾಮಚಂದ್ರಪ್ಪಗೆ ಟಿಕೆಟ್ ಫೈನಲ್ ಆಗಬಹುದು. ಮಾಯಕೊಂಡ ಕ್ಷೇತ್ರದಲ್ಲಿ ಆಕಾಂಕ್ಷಿಗಳು ಜಾಸ್ತಿ ಇರುವುದರಿಂದ ಯಾರಿಗೆ ಟಿಕೆಟ್‌ ಎಂಬುದು ಕುತೂಹಲ ಮೂಡಿಸಿದೆ. ಈಗಾಗಲೇ ಜಿಲ್ಲೆಯ ಕಾಂಗ್ರೆಸ್‌ನ ಎಲ್ಲಾ ಅಭ್ಯರ್ಥಿಗಳು ಘೋಷಣೆಯಾಗಿರುವುದರಿಂದ ಇನ್ನೂ 5 ಕ್ಷೇತ್ರಗಳ ಆಕಾಂಕ್ಷಿಗಳಲ್ಲಿ ಆತಂಕ ಮನೆ ಮಾಡಿರುವುದು ಸುಳ್ಳಲ್ಲ.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು