• A
  • A
  • A
ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಹೂರ್ತ ಫಿಕ್ಸ್​ ​

ಧಾರವಾಡ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದೆ. ಜನವರಿ 4, 5, ಮತ್ತು 6 ರಂದು ಸಾಹಿತ್ಯ ಸಮ್ಮೇಳನ ನಡೆಯುವುದು ಖಚಿತವಾಗಿದೆ.


ಇಂದು ಜಿಲ್ಲಾಧಿಕಾರಿ ದೀಪಾ ಚೋಳನ್​ ಅವರು ಅಧಿಕಾರಿಗಳೊಂದಿಗೆ ನಗರದ ಕರ್ನಾಟಕ ಕಲಾ ಮಹಾವಿದ್ಯಾಲಯ ಆವರಣವನ್ನು ಪರಿಶೀಲಿಸಿದರು. ಇದೇ ವೇಳೆ ಸಮ್ಮೇಳನದ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ಈ ಮೊದಲು ಡಿಸೆಂಬರ್​ ಮೊದಲ ವಾರದಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಸಮಯದ ಅಭಾವದಿಂದ ಜನವರಿ 6, 7,8 ಕ್ಕೆ ರಂದು ಸಮ್ಮೇಳನದ ದಿನಾಂಕ ನಿಗದಿಯಾಗಿತ್ತು. ಈಗ ಮೂರನೇ ಬಾರಿಗೆ ದಿನಾಂಕ ನಿಗದಿ ಮಾಡಲಾಗಿದೆ.

ಕೆಸಿಡಿ ಕಾಲೇಜು ಆವರಣದಲ್ಲಿ ಸಮ್ಮೇಳನ ನಡೆಯಲಿದೆ. ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಧಿಕಾರಿಗಳು ಹಾಗೂ ಸಾಹಿತಿಗಳನ್ನೊಳಗೊಂಡ 12 ಸಮಿತಿಗಳನ್ನ ರಚಿಸಲಾಗಿದ್ದು, 2 ಲಕ್ಷ ಜನರು ಸಮ್ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಜಿಲ್ಲಾಧಿಕಾರಿ ದೀಪಾ ಮಾಹಿತಿ ನೀಡಿದ್ದಾರೆ.

CLOSE COMMENT

ADD COMMENT

To read stories offline: Download Eenaduindia app.

SECTIONS:

  ಹೋಮ್

  ರಾಜ್ಯ

  ದೇಶ

  ವಿದೇಶ

  ವಾಣಿಜ್ಯ

  ಕ್ರೈಂ

  ಕ್ರೀಡೆ

  ಸಿನಿಲೋಕ

  ಕಾಮನಬಿಲ್ಲು

  ಸ್ತ್ರೀ ಲಹರಿ

  ಗ್ಯಾಲರಿ

  ಪ್ರವಾಸ

  ಪ್ರಮುಖ ನಗರಗಳು